ಪ್ರಜಾಸ್ತ್ರ ಸುದ್ದಿ
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಈ ಬಗ್ಗೆ ಚಿತ್ರ ತಂಡ ಪೋಸ್ಟರ್ ಬಿಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದೆ. ಶೀಘ್ರದಲ್ಲಿ ಸಿನಿಮಾ ಬಿಡುಗಡೆ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದೆ. ಈ ಮೂಲಕ ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಕ್ಷಣಗಳು ಆದಷ್ಟು ಬೇಗ ಬರಲಿದೆ. ಇದರೊಂದಿಗೆ ಕಾಟೇರ ಬಳಿಕ ಮತ್ತೊಂದು ಬಿಗ್ ಹಿಟ್ ನೀಡಲು ಅಭಿಮಾನಿಗಳು ಸಜ್ಜಾಗಿದ್ದಾರೆ.
ಡೆವಿಲ್ ಚಿತ್ರವನ್ನು ಮಿಲನ ಪ್ರಕಾಶ್ ವೀರ್ ನಿರ್ದೇಶನ ಮಾಡಿದ್ದಾರೆ. ಜೆ.ಜಯಮ್ಮ ಅವರು ನಿರ್ಮಾಣ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಮ್ಯೂಸಿಕ್ ನೀಡಿದ್ದಾರೆ. ನಟಿ ರಚನಾ ರೈ ದರ್ಶನಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನ ನಟರಾದ ಮಹೇಶ್ ಮಂಜ್ರೇಕರ್, ಜಿಶು ಸಿಂಗೆಪ್ತ, ಫರ್ದಿನ್ ಖಾನ್, ಮುಖೇಶ್ ರಿಷಿ ಲೀಡ್ ರೋಲ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಧ್ಯ ನಟ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗುತ್ತಿರುವವರು ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದಾರೆ. ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ. ಬಿಗ್ ಬಾಸ್ ವಿಜೇಯತ ಪ್ರಥಮ್ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡುತ್ತಲೇ ಇದ್ದಾರೆ. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಆದರೆ, ನಟ ದರ್ಶನರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.