Ad imageAd image

ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣ, ಡಿಜಿಪಿ ರಾಮಚಂದ್ರ ರಾವ್ ಅಮಾನತು

Nagesh Talawar
ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣ, ಡಿಜಿಪಿ ರಾಮಚಂದ್ರ ರಾವ್ ಅಮಾನತು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಾಮಾಜಿಕ ಜಾಲತಾಣದಲ್ಲಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದ ಎನ್ನಲಾದ ವಿಡಿಯೋ ಹರಿದಾಡುತ್ತಿದೆ. ಕಚೇರಿಯಲ್ಲಿಯೇ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ರಾಜ್ಯ ಸರ್ಕಾರ ಇದೀಗ ಇವರನ್ನು ಅಮಾನತುಗೊಳಿಸಿದೆ. ಈ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಉನ್ನತ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಮಚಂದ್ರ ರಾವ್, ನನ್ನ ವೃತ್ತಿ ಜೀವನಕ್ಕೆ ಕಪ್ಪು ಚುಕ್ಕೆ ತರಲು ಷಡ್ಯಂತ್ರ ರೂಪಿಸಲಾಗಿದೆ. ಎಐ ತಂತ್ರಜ್ಞಾನ ಬಳಸಿ ಮಾಡಿದ ವಿಡಿಯೋ ಅಥವ ಎಡಿಟ್ ಮಾಡಿರುವ ವಿಡಿಯೋ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು. 8 ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಅಲ್ಲಿದು ಅದು. ಇದೆಲ್ಲ ಸುಳ್ಳು ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಯಾವುದೇ ಮುಲಾಜಿಲ್ಲದೆ ತುರ್ತು ಕ್ರಮ ತೆಗೆದುಕೊಂಡಿದ್ದೇವೆ. ತನಿಖೆಯಾದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಇದೆಲ್ಲ ಸುಳ್ಳು ಎಂದು ಡಿಜಿಪಿ ಹೇಳಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯಲಿದೆ. ಮೇಲ್ನೋಟಕ್ಕೆ ಕಾಣಿಸುತ್ತಿರುವುದರಿಂದ ಕ್ರಮ ತೆಗೆದುಕೊಳ್ಳಲಾಗಿದೆ. ವಜಾ ಕೂಡಾ ಆಗಬಹುದು ಎಂದಿದ್ದಾರೆ.

WhatsApp Group Join Now
Telegram Group Join Now
Share This Article