ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ(Shivamogga): ಧರ್ಮಸ್ಥಳ ಗ್ರಾಮದಲ್ಲಿ ಅಪರಾಧಿ ಕೃತ್ಯಗಳು ನಡೆದಿದ್ದು, ಮೃತದೇಹಗಳನ್ನು ಹೂತು ಹಾಕಲಾಗಿದೆ ಅನ್ನೋ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಹೀಗಾಗಿ ಗುರುವಾರ ಮುಂಜಾನೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಂಗಳೂರಿನ ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ಕೋರ್ಟ್ ನವೆಂಬರ್ 24ರಂದು ಷರತ್ತುಬದ್ಧ ಜಾಮೀನು ನೀಡಿದೆ.
1 ಲಕ್ಷ ರೂಪಾಯಿ ಭದ್ರತಾ ಠೇವಣಿ ಇಡಲು ಕೋರ್ಟ್ ಹೇಳಿತ್ತು. ಅದನ್ನು ನೀಡಲು ವಿಳಂಬವಾದ ಹಿನ್ನಲೆಯಲ್ಲಿ ಆತನ ಬಿಡುಗಡೆ ಆಗಿರಲಿಲ್ಲ. ಬುಧವಾರ ರಾತ್ರಿ ಚಿನ್ನಯ್ಯನ ಪತ್ನಿ ಮಲ್ಲಿಕಾ, ಸಹೋದರಿ ಹಾಗೂ ವಕೀಲರು ಕಾರಾಗೃಹದ ಮುಖ್ಯ ಅಧೀಕ್ಷಕರಿಗೆ ಜಾಮೀನು ಪ್ರಕ್ರಿಯೆ ದಾಖಲೆಗಳನ್ನು ತೋರಿಸಿದರು. ಇಂದು ಮುಂಜಾನೆ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಿಂದ ಮಂಗಳೂರಿಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.




