ಪ್ರಜಾಸ್ತ್ರ ಸುದ್ದಿ
ಧರ್ಮಸ್ಥಳ(Dharmasthala): ಬಿಜೆಪಿ ವತಿಯಿಂದ ಧರ್ಮಸ್ಥಳ ಚಲೋ, ಸಮಾವೇಶವನ್ನು ಸೋಮವಾರ ನಡೆಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ನಾಯಕರು, ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.
ಇನ್ನು ಕಾರ್ಯಕ್ರಮಕ್ಕೂ ಮೊದಲ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತ ನಡೆಸಿದರು. ಮಂಜುನಾಥಸ್ವಾಮಿಯ ದರ್ಶನ ಪಡೆದರು. ನಂತರ ಬೃಹತ್ ಸಮಾವೇಶ ನಡೆಸಲಾಯಿತು. ಈ ವೇಳೆ ರಾಜ್ಯ ಕಾಂಗ್ರೆಸ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಯಿತು. ಇಲ್ಲಸಲ್ಲದ ಆರೋಪ ಮಾಡಲಾಗಿದೆ. ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ ಮಾಡಲು ಷಡ್ಯಂತ್ರ ನಡೆಸಲಾಗಿದೆ. ಹಿಂದುಮುಂದು ನೋಡದೆ ಎಸ್ಐಟಿ ರಚನೆ ಮಾಡಿ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಲಾಯಿತು ಎಂದು ಕಿಡಿ ಕಾರಿದರು.