Ad imageAd image

ಧಾರವಾಡ: ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಹತ್ಯೆ

Nagesh Talawar
ಧಾರವಾಡ: ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಧಾರವಾಡ(Dharwad): ದುಷ್ಕರ್ಮಿಗಳು ಮನೆಗೆ ನುಗ್ಗಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ(34) ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಆಸ್ಮಿನಗರದಲ್ಲಿ ಶುಕ್ರವಾರ ರಾತ್ರಿ ಈ ಕೃತ್ಯ ಎಸಗಲಾಗಿದೆ. ಕೊಲೆ ಮಾಡಿದ್ದು ಯಾರು, ಯಾವ ಉದ್ದೇಶದಿಂದ ಹತ್ಯೆ ಮಾಡಲಾಗಿದೆ ಅನ್ನೋದು ತಿಳಿದು ಬರಬೇಕಿದೆ.

ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ರಕ್ತದ ಮುಡುವಿನಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮದುವೆ ಕಾರ್ಡ್ ಕೊಟ್ಟು ಮನೆಗೆ ಬಂದು ಒಂದು ಗಂಟೆಯಾಗಿತ್ತು ಎಂದು ಹೇಳಲಾಗುತ್ತಿದೆ. ಅಷ್ಟರಲ್ಲಿ ಈ ಕೃತ್ಯ ನಡೆದಿದೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

WhatsApp Group Join Now
Telegram Group Join Now
Share This Article