ಪ್ರಜಾಸ್ತ್ರ ಸುದ್ದಿ
ಧಾರವಾಡ(Dharwad): ರೈಲಿಗೆ ತಲೆ ಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಗಿರಿ ಹತ್ತಿರ ನಡೆದಿದೆ. ಬಳ್ಳಾರಿ ಮೂಲದ ಪಲ್ಲವಿ ಕಗ್ಗಲ್(24) ಅನ್ನೋ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎರಡು ಡೆತ್ ನೋಟ್ ಸಿಕ್ಕಿದ್ದು, ಆರೋಗ್ಯ ಸಮಸ್ಯೆ ಹಾಗೂ ವೈಯಕ್ತಿಕ ಕಾರಣದಿಂದ ಈ ರೀತಿ ಮಾಡಿಕೊಂಡಿದ್ದಾಳೆ ಎಂದು ಅದರಲ್ಲಿ ಬರೆದಿದ್ದಾಳೆ ಅಂತಾ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಯುವತಿಗೆ ಆರೋಗ್ಯ ಸಮಸ್ಯೆ ಇತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದಳು ಎಂದು ಕುಟುಂಬಸ್ಥರು ಹೇಳಿದ್ದಾರೆ. ಬಳ್ಳಾರಿಯ ಅಲ್ಲಂ ಸುಮಂಗಳಮ್ಮ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿದ್ದಾಳೆ.




