ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಜೈಲಿನಲ್ಲಿದ್ದಾರೆ. ಆದ್ರೆ, ಪೊಲೀಸರು ಈ ಪ್ರಕರಣದ ತನಿಖೆಯಲ್ಲಿ ತಪ್ಪು ಮಾಡಿದ್ದಾರೆ. ಆರೋಪಿಗಳ ಮೊಬೈಲ್ ಸೀಜ್ ಮಾಡಿ ಮಹಜರ್ ವೇಳೆ ತಪ್ಪು ಮಾಹಿತಿಯನ್ನು ನೀಡಿದ್ದಾರೆ ಎಂದು ವಕೀಲರು ಸಾಕ್ಷಿ ಸಮೇತ ವಾದ ಮಂಡಿಸಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ 64ನೇ ಸಿಸಿಎಚ್ ಕೋರ್ಟ್ ಆದೇಶಿಸಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮಹಜರ್ ಮಾಡಲಾಗಿದೆ ಎಂದು ಕ್ಯಾಬಿನ್ ನಲ್ಲಿ ನಿಲ್ಲಿಸಿರುವ ಫೋಟೋ ಸಲ್ಲಿಸಲಾಗಿದೆ. ಆದರೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಟೈಲ್ಸ್ ಇಲ್ಲ. ಬೇರೆ ಎಲ್ಲೋ ನಿಲ್ಲಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಎಂದು ಹೇಳಲಾಗಿದೆ ಎಂದು ವಕೀಲರಾದ ಸುಧನ್ವ ವಾದ ಮಂಡಿಸಿದ್ದಾರೆ. ಅಲ್ಲದೆ ಈ ಪ್ರಕರಣದ ತನಿಖೆ ನಡೆಸುತ್ತಿರುವ ಇನ್ಸ್ ಪೆಕ್ಟರ್ ಗಿರೀಶ್ ನಾಯಕ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ನಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.




