Ad imageAd image

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಗಣ್ಯರ ಸಂತಾಪ

Nagesh Talawar
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಗಣ್ಯರ ಸಂತಾಪ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಬುಧವಾರ ಮುಂಜಾನೆ ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ಅಲ್ಲದೆ ವಿಮಾನದಲ್ಲಿದ್ದ ಉಳಿದ ಐವರು ಸಹ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ದುರಂತದ ಬಗ್ಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್, ಶಾ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಜಿತ್ ಪವಾರ್ ಜನನಾಯಕರಾಗಿದ್ದರು. ತಳಮಟ್ಟದಿಂದ ಸಂಪರ್ಕ ಹೊಂದಿದ್ದರು. ಕಠಿಣ ಹಾಗೂ ಪರಿಶ್ರಮ ವ್ಯಕ್ತಿತ್ವ. ಆಡಳಿತಾತ್ಮಕ ತಿಳವಳಿಕೆ, ಬಡವರು, ದೀನ ದಲಿತರ ಅಭಿವೃದ್ಧಿ ಬಗ್ಗೆ ಅವರಲ್ಲಿದ್ದ ಉತ್ಸಾಹ ಗಮನಾರ್ಹ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಎನ್ ಡಿಎ ಮೈತ್ರಿಕೂಟದ ಪ್ರಮುಖ ಪಾಲುದಾರರಾದ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಭೇಟಿ ಮಾಡಿದಾಗೆಲ್ಲ ಜನರ ಕಲ್ಯಾಣದ ವಿಚಾರ ಬಗ್ಗೆ ಮಾತನಾಡುತ್ತಿದ್ದರು. ಅವರ ನಿಧನದಿಂದ ಎನ್ ಡಿಎ ಮೈತ್ರಿಕೂಟ ಹಾಗೂ ವೈಯಕ್ತಿಕವಾಗಿ ನನಗೆ ತುಂಬಾ ನಷ್ಟವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಅನ್ನೋ ವಾರ್ತೆ ತಿಳಿದು ಆಘಾತ ಉಂಟಾಯಿತು. ಮಹಾರಾಷ್ಟ್ರದ ಪ್ರಭಾವಿ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article