Ad imageAd image

ಪೋಷಕ ನಟ ಮಂಗಳೂರು ದಿನೇಶ್ ನಿಧನ

Nagesh Talawar
ಪೋಷಕ ನಟ ಮಂಗಳೂರು ದಿನೇಶ್ ನಿಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಉಡುಪಿ(Udupi): ಕನ್ನಡ ಚಿತ್ರರಂಗದ ಪೋಷಕ ನಟ ಮಂಗಳೂರು ದಿನೇಶ್ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಂದಾಪುರದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರಂತೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬ್ರೈನ್ ಹೆಮರೇಜ್ ಆಗಿ ಕಳೆದ ಐದು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರ ನಿಧನಕ್ಕೆ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ.

ಕನ್ನಡದ ಸೂಪರ್ ಹಿಟ್ ಸಿನಿಮಾಗಳಾದ ಕಿರಿಕ್ ಪಾರ್ಟಿ, ಕೆಜಿಎಫ್, ಆ ದಿನಗಳು, ಉಳಿದವರ ಕಂಡಂತೆ, ರಣ ವಿಕ್ರಮ, ಇಂತಿ ನಿನ್ನ ಪ್ರೀತಿಯ, ಸವಾರಿ, ಅಂಬಾರಿ, ಹರಿಕಥೆ ಅಲ್ಲ ಗಿರಿಕಥೆ, ರಿಕ್ಕಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿ ಪ್ರೇಮಿಗಳು ನೆನಪಿನಲ್ಲಿಡುವಂತಹ ಪಾತ್ರಗಳನ್ನು ನಟ ಮಂಗಳೂರು ದಿನೇಶ್ ಮಾಡಿದ್ದಾರೆ. ನಟನಾಗಿ ಗುರುತಿಸಿಕೊಳ್ಳುವುದಕ್ಕಿಂತಲೂ ಮೊದಲು ಕಲಾ ನಿರ್ದೇಶಕರಾಗಿ ಹಲವಾರು ಯಶಸ್ವಿ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article