ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕನ್ನಡ ಚಿತ್ರರಂಗದ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಪಕ್ಕದಲ್ಲಿಯೇ ಇರುವ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ವಿಷ್ಣುರ್ವಧನ್ ನಟನೆಯ ಸಾಹಸ ಸಿಂಹ, ಅಂಬರೀಶ್ ನಟನೆಯ ಏಜೆಂಟ್ ಅಮರ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಊರಿಗೆ ಉಪಕಾರಿ, ಬಂಗಾರದ ಗುಡಿ, ಸಹೋದರರ ಸವಾಲ್, ಒಂದು ಪ್ರೇಮದ ಕಥೆ, ನ್ಯಾಯ ಗೆದ್ದಿತು, ರವಿ ವರ್ಮಾ ಸೇರಿದಂತೆ ಹಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಜೋ ಸೈಮನ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.




