ಪ್ರಜಾಸ್ತ್ರ ಸುದ್ದಿ
ಹಾಸನ(Hasana): ಗಣೇಶ ಮೆರವಣಿಗೆ ವೇಳೆ ನಡೆದ ಅಪಘಾತದಲ್ಲಿ 10 ಜನರು ಮೃತಪಟ್ಟ ಘಟನೆ ಸಂಬಂಧ, ಕ್ಯಾಂಟರ್ ಚಾಲಕನನ್ನು ಬಂಧಿಸಲಾಗಿದೆ. ಕಳೆದ ರಾತ್ರಿ ಚಾಲಕ ಭುವನೇಶ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ವಶಕ್ಕೆ ಪಡೆಯಲಾಗಿದೆ. ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡೆಸಲಿದ್ದಾರೆ.
ನಾಗಮಂಗಲದ ಬೆಳ್ಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಾಲಕ ಮದ್ಯಪಾನ ಮಾಡಿದ್ದಾನ ಇಲ್ಲವಾ ಎಂದು ರಕ್ತದ ಪರೀಕ್ಷೆಗೆ ಕಳಿಸಲಾಗಿತ್ತು. ಇಂದು ಅದರ ವರದಿ ಬರುವ ಸಾಧ್ಯತೆಯಿದೆ. ನಿರ್ಲಕ್ಷ್ಯದ ಚಾಲನೆ ಅಡಿಯಲ್ಲಿ ಭುವನೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ.