ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಸಿಂದಗಿ ಶೈಕ್ಷಣಿಕ ಕಾಶಿ. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ತಾಲೂಕು ಎಂದರೆ ಸಿಂದಗಿ ಎಂದು ಸಿಂದಗಿ ಪಿಎಸ್‌ಐ ಶ್ರೀಕಾಂತ ಕಾಂಬಳೆ ಹೇಳಿದರು. ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ತಮ್ಮ ಗುರಿಯನ್ನು ತಲುಪಬೇಕಾದರೆ ಪ್ರತಿಭೆ, ಚಾಕಚಕ್ಯತೆ, ಶಿಸ್ತು, ಸಂಯಮ ಬಹಳ ಅತ್ಯವಶ್ಯಕ. ಇತ್ತೀಚಿನ ದಿನಮಾನಗಳಲ್ಲಿ ಮಕ್ಕಳು ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಮಕ್ಕಳು ಒಳ್ಳೆಯ ಶಿಕ್ಷಣವನ್ನು ಪಡೆದು ಉನ್ನತ ಸ್ಥಾನಕ್ಕೆ ಏರಲಿ ಎಂಬ ಕನಸನ್ನು ಹೊತ್ತ ತಂದೆ-ತಾಯಿಗಳಿಗೆ ನಿರಾಸೆ ಮಾಡದೆ ವಿದ್ಯಾರ್ಥಿಗಳು ಓದಿನೆಡೆಗೆ ಹೆಚ್ಚಿನ ಗಮನ ಹರಿಸಿ ಸಾಧನೆ ಮಾಡಬೇಕು ಸಲಹೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಎಂ.ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯ ಮೇಲೆ ಸಂಸ್ಥೆಯ ಸಹ ಕಾರ್ಯದರ್ಶಿ ಅಶೋಕ ವಾರದ, ಜಿ.ವಿ.ಪಾಟೀಲ, ಪ್ರಧಾನ ಕಾರ್ಯದರ್ಶಿ ಸಂಗಮ್ಮ ಪೂಜಾರಿ ಇದ್ದರು. ಆರ್.ಡಿ.ಪಾಟೀಲ ಕಾಲೇಜಿನ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜೆ.ಸಿ.ನಂದಿಕೋಲ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜೆ.ಸಿ.ನಂದಿಕೋಲ, ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದಿಂದ ನಡೆಯುವ 2024-25ನೇ ಸಾಲಿನ ಪದ್ಮರಾಜ ಮಹಿಳಾ ಮಹಾವಿದ್ಯಾಲಯದ ಬಿ.ಎಸ್.ಡಬ್‌ಲ್ಯೂ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ (ಚಿನ್ನದ ಪದಕ) ಪಡೆದ ವಿದ್ಯಾರ್ಥಿನಿ ಮೀನಾಜ ಗೋಲಗೇರಿ, ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಿಯಾನಾಬೇಗಂ ಬಂಕಲಗಿ, ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯಕ್ಕೆ ಬ್ಲೂ ಆಗಿ ಆಯ್ಕೆಯಾದ ವಿದ್ಯಾರ್ಥಿನಿಯರಾದ ಸಿದ್ದಮ್ಮ ಬಿರಾದಾರ ಹಾಗೂ ಶೈಲಜಾ ಪಾಟೀಲ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಪುಪೂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಮ್.ಎಸ್.ಹೈಯಾಳಕರ, ಪ್ರಾಚಾರ್ಯ ವಿ.ಡಿ.ಪಾಟೀಲ, ವಿಶ್ವನಾಥ ನಂದಿಕೋಲ, ಮಹಾವಿದ್ಯಾಲಯದ ಸಿಬ್ಬಂದಿಯಾದ ಮಹಾಂತೇಶ ನೂಲಾನವರ, ಉಮೇಶ ಪೂಜೇರಿ, ಗಿರೀಶ ಕುಲಕರ್ಣಿ, ಮುರ್ತುಜಬಿಬೇಗಂ ಬಿರಾದಾರ, ನಿಲಮ್ಮ ಬಿರಾದಾರ, ಭಾಗ್ಯಶ್ರೀ ನಂದಿಮಠ, ಸರೋಜಿನಿ ಹಿರೇಮಠ, ಎಸ್.ಎಸ್.ಕಲಶೆಟ್ಟಿ, ಎಸ್.ಸಿ.ದುದ್ದಗಿ, ಮಂಗಳಾ ಈಳಗೇರ, ಡಿ.ಎಮ್.ಪಾಟೀಲ್, ಮಮತಾ ಹರನಾಳ, ಶಿವಶಂಕರ ಕುಂಬಾರ, ಬಸು, ವಿಜಯಲಕ್ಷ್ಮಿ ಭಜಂತ್ರಿ ಸೇರಿದಂತೆ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಎ.ಆರ್.ಸ್ವಾಗತಿಸಿದರು. ಕಾರ್ಯಾಧ್ಯಕ್ಷೆ ಭ್ಯಾಗ್ಯ ಬಬಲೇಶ್ವರ ವರದಿ ವಾಚಿಸಿದರು. ಜಿ.ಎ.ನಂದಿಮಠ ವಂದಿಸಿದರು.




