Ad imageAd image

ವಿಜಯಪುರ ಜಿಲ್ಲೆಯ ಎಲ್ಲ ಕೆರೆಗಳ ಭರ್ತಿಗೆ ಜಿಲ್ಲಾಧಿಕಾರಿ ಮನವಿ

Nagesh Talawar
ವಿಜಯಪುರ ಜಿಲ್ಲೆಯ ಎಲ್ಲ ಕೆರೆಗಳ ಭರ್ತಿಗೆ ಜಿಲ್ಲಾಧಿಕಾರಿ ಮನವಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯ ಎಲ್ಲಾ ತಾಲೂಕುಗಳು ಬರಗಾಲ(Drought) ಪೀಡಿತ ಪ್ರದೇಶಗಳು ಎಂದು ಸರ್ಕಾರ ಘೋಷಿಸಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ, ಪಕ್ಕದ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ(Krishna river) ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಿಲ್ಲೆಯಲ್ಲಿ 6,70331 ಹೆಕ್ಟೇರ್ ಪ್ರದೇಶದಲ್ಲಿ ರೈತರು ಬಿತ್ತನೆ ಕಾರ್ಯ ಕೈಗೊಂಡಿರುವುದರಿಂದ ಸಮರ್ಪಕವಾಗಿ ಜಿಲ್ಲೆಯ ಎಲ್ಲ ಕೆರೆ, ಕಟ್ಟೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು, ರೈತರ ಬೇಡಿಕೆಯಾಗಿದೆ. ಹೀಗಾಗಿ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ(KBJNL) ಇವರಿಗೆ ಜಿಲ್ಲಾಧಿಕಾರಿಗಳು ಪತ್ರ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆ, ಕಟ್ಟೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡುವ ಕ್ರಮಕ್ಕಾಗಿ ವ್ಯವಸ್ಥಾಪಕ ನಿರ್ದೇಶಕರು ಕೃಷ್ಣಾ ಭಾಗ್ಯ ಜಲ ನಿಗಮದ  ಇವರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕೇಳಿದ್ದಾರೆ.

ಸಾಂದರ್ಭಿಕ ಚಿತ್ರ

WhatsApp Group Join Now
Telegram Group Join Now
Share This Article