Ad imageAd image

ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ

Nagesh Talawar
ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮುದ್ದೇಬಿಹಾಳ ತಾಲೂಕಿನ ಯರಗಲ್ಲ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು. ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿಯ ಕುರಿತು ಪರಿಶೀಲನೆ ನಡೆಸಿದರು. ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿಸುವಂತೆ ಸೂಚನೆ ನೀಡಿದ ಅವರು, ರೈತರಿಂದ ದೂರುಗಳು ಬಾರದಂತೆ ನೋಡಿಕೊಳ್ಳುವಂತೆಯೂ, ಕಾರ್ಮಿಕರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಿಳಿಸಿ, ನಿಯಮಾನುಸಾರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಅವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಮುದ್ದೇಬಿಹಾಳ ತಹಶೀಲ್ದಾರ್, ಪರಿಸರ ಅಧಿಕಾರಿ ವಿವೇಕ ಹಾಗೂ ರೈತಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article