Ad imageAd image

ಡೋಣಿ ನದಿ ಪ್ರವಾಹ ತಡೆಗೆ ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರೀಯಾಯೋಜನೆಯನ್ನು

Nagesh Talawar
ಡೋಣಿ ನದಿ ಪ್ರವಾಹ ತಡೆಗೆ ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರೀಯಾಯೋಜನೆಯನ್ನು ಸಿದ್ಧಪಡಿಸುವಂತೆ ಸಂಬಂಧಿಸಿದ ಆಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.

ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ ಹೂಳು ತುಂಬಿಕೊಂಡು ಸೇತುವೆಯ ಎತ್ತರ ಕಡಿಮೆಯಾಗಿ ನೀರಿನ ಶೇಖರಣೆ ಸಾಧ್ಯವಾಗದೇ ಇರುವುದರಿಂದ ನದಿಯಲ್ಲಿ ಹರಿಯುವ ನೀರಿನ ಒತ್ತಡ ಹೆಚ್ಚಾಗಿ ನೀರು ತನ್ನ ಪಥ ಬದಲಿಸಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಲಿರುವುದರಿಂದ ಡೋಣಿಗೆ ಸೇರುವ ಕಾಲುವೆಗಳನ್ನು ಪರಿಶೀಲನೆ ಹಾಗೂ ಡೋಣಿ ವ್ಯಾಪ್ತಿಯ ವಿವಿಧೆಡೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಇರುವ ಅವಕಾಶ ಮತ್ತು ಡೋಣಿ ನದಿಯಿಂದ ಬೇರೆ ಕಾಲುವೆ, ಕೆರೆ-ಕಟ್ಟೆಗಳಿಗೆ ನೀರನ್ನು ಹರಿಸುವ ಸಾಧ್ಯಸಾಧ್ಯತೆ ಕುರಿತು ಪರಿಶೀಲನೆ ನಡೆಸಬೇಕು. ಡೋಣಿ ನದಿಯಲ್ಲಿ ತುಂಬಿರುವ ಹೂಳಿ ಪ್ರಮಾಣದ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕೆಬಿಜೆಎನ್‌ಎಲ್ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಡೋಣಿ ನದಿಯಲ್ಲಿ ಹೂಳು ತುಂಬಿ, ಜಾಲಿ ಕಂಟಿಗಳು ಬೆಳೆದು ನೀರು ಸರಾಗವಾಗಿ ಹರಿಯದೇ ಒಂದೇ ಕಡೆ ನೀರು ಜಮಾವಣೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುವ ಕುರಿತು ರೈತರಿಗೆ ಸೂಕ್ತ ತಿಳುವಳಿಕೆ ಮೂಡಿಸಬೇಕು. ಹರನಾಳ, ಸಾರವಾಡ, ಎನ್.ಎಚ್ 218 ಹೊನಗನಹಳ್ಳಿ, ಹಿಟ್ನಳ್ಳಿ ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಜ್‌ಗಳ ಪ್ರದೇಶದಲ್ಲಿ ಸರ್ವೇ ಕಾರ್ಯ ಕೈಗೊಳ್ಳಬೇಕು. ಸರ್ವೇ ಕಾರ್ಯ ಪೂರ್ಣಗೊಳಿಸಿದ ನಂತರ ಅವಶ್ಯಕತೆ ಇದ್ದಲ್ಲಿ ಈ ಪ್ರದೇಶದಲ್ಲಿ ಪ್ರಾಯೋಗಿಕವಾಗಿ 150 ಮೀಟರ್ ಹೂಳು ತೆಗೆಯುವುದು,  ಜಾಲಿ ಕಂಟಿಗಳನ್ನು ತೆರವುಗೊಳಿಸುವ ಕುರಿತಂತೆ ತಗಲುವ ವೆಚ್ಚ ಸೇರಿದಂತೆ ಮುಂಚಿತವಾಗಿಯೇ ಸೂಕ್ತ ಕ್ರೀಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. ಯಾವುದೇ ಸಮಸ್ಯೆ ಎದುರಾದರೂ ಕೈಗೊಳ್ಳಬಹುದಾದ ಪರಿಹಾರ ಕುರಿತು ಮುಂಚಿತವಾಗಿಯೇ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಅವರು ಸೂಚನೆ ನೀಡಿದರು.

WhatsApp Group Join Now
Telegram Group Join Now
Share This Article