ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ತಾಲೂಕಾ ಆಡಳಿತದ ಕಾರ್ಯವೈಖರಿ, ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ದೇವರ ಹಿಪ್ಪರಗಿ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ಅವರು, ಆಧಾರ್ ನೋಂದಣಿ, ಕಂದಾಯ ಗ್ರಾಮ ಮಾಹಿತಿ, ಭೂಮಿ ಪ್ರಗತಿ, ಈ-ಪೌತಿ ಖಾತೆ ಪ್ರಗತಿ, ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಿದರು.
ತಾಲೂಕಿನ ಹಳ್ಳಿಗಳಿಗೆ ಸ್ಮಶಾನ ಜಾಗ ಅವಶ್ಯವಿದ್ದಲ್ಲಿ ಸರ್ಕಾರಿ ಜಮೀನು ಗುರುತಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅವರು ಈ ಸಂದರ್ಭದಲ್ಲಿ ತಿಳಿಸಿದರು. ಮಿನಿ ಪ್ರಜಾಸೌಧ ಕಟ್ಟಡದ ಜಾಗ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ನಿಂಗಪ್ಪ ಬಿರಾದಾರ, ಮುಖ್ಯಾಧಿಕಾರಿ ಕಲಾಲ ಸೇರಿದಂತೆ ಶಿರಸ್ತೇದಾರರು, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.




