ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ(DC) ಟಿ.ಭೂಬಾಲನ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳು, ಸಿಬ್ಬಂದಿ ಯಾವ ರೀತಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಪರಿಶೀಲಿಸಿದರು. ಸಾರ್ವಜನಿಕರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡರು.
ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ಅವರು, ಆಧಾರ್(Aadhaar) ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ನಂತರ ಉಪನೋಂದಣಾಧಿಕಾರಿಗಳ ಕಚೇರಿ ಹಾಗೂ ಪುರಸಭೆ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆ ಕುರಿತು(Verification) ಪರಿಶೀಲಿಸಿದರು. ಸಾರ್ವಜನಿಕರ(Public) ಕೆಲಸಗಳನ್ನು ಕಲಾವಕಾಶದೊಳಗೆ ಮಾಡಿಕೊಡಬೇಕು. ವಿನಾಃಕಾರಣ ಅವರನ್ನು ಅಲೆಯುವಂತೆ ಮಾಡಬಾರದು ಎಂದು ಅಧಿಕಾರಿಗಳು, ಸಿಬ್ಬಂದಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.