ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ ಬಿ ವೃಂದದ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಅಂಜುಮನ್ ಕಾಲೇಜ್, ಪಾಲಿಟೆಕ್ನಿಕ್ ಕಾಲೇಜ್, ಬಿಡಿಇ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರಕ್ಕೆ ಮಂಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದವರಿಗೆ ಅವರು ಸೂಚನೆ ನೀಡಿದರು.