ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಹಿಂದುತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿರುವ ಬಗ್ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಶನಿವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದು, ಹಿಂದುತ್ವದ ಬಗ್ಗೆ ತಮ್ಮ ನಿಲುವು ಪ್ರಕಟಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಈಗ್ಲಾದರೂ ಅವರಿಗೆ ಬುದ್ದಿ ಬಂದಿದೆ. ಅವರ ನಿಲುವು ನಾಟಕವೂ ನಿಜವೋ ದೇವರ ತೀರ್ಮಾನಿಸುತ್ತಾನೆ ಎಂದಿದ್ದಾರೆ.
ಹಳೆ ಕಾಂಗ್ರೆಸ್ಸಿಗರ ರಕ್ತದಲ್ಲಿ ಹಿಂದುತ್ವವಿದೆ. ಎಲ್ಲರೂ ಧರ್ಮದ್ರೋಹಿಗಳಲ್ಲ. ಮತಬ್ಯಾಂಕ್ ಸಲುವಾಗಿ ಕೆಲವರು ಮುಸ್ಲಿಂರನ್ನು ಓಲೈಕ್ ಮಾಡುತ್ತಾರೆ ಎಂದು ಈಶ್ವರಪ್ಪ ಕಿಡಿ ಕಾರಿದ್ದಾರೆ. ಇತ್ತೀಚೆಗೆ ಪತ್ನಿಯೊಂದಿಗೆ ಕುಂಭಮೇಳದಲ್ಲಿ ಭಾಗವಹಿಸಿದ್ದ ಡಿ.ಕೆ ಶಿವಕುಮಾರ್, ಮಹಾತ್ಮ ಗಾಂಧಿ ಸಹ ಹಿಂದುತ್ವದ ಪ್ರತಿಪಾದಕರಾಗಿದ್ದರು. ಅವರ ಸಮಾಧಿ ಮೇಲೆ ಹೇ ರಾಮ್ ಇದೆ. ಹೇ ಅಲ್ಲ, ಹೇ ಯೇಸು ಇಲ್ಲ. ಹಿಂದುತ್ವ ಬಿಜೆಪಿ ಸ್ವತ್ತಲ್ಲ. ಸರ್ವ ಜನರ ಸುಖ ಬಯಸುವುದೇ ಹಿಂದುತ್ವ ಎಂದು ಹೇಳಿದ್ದರು. ಅಂದಿನಿಂದ ಡಿ.ಕೆ ಶಿವಕುಮಾರ್ ಬಿಜೆಪಿ ಸೇರುವ ಸನೀಹದಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕುಂಭಮೇಳದ ಪುಣ್ಯಸ್ನಾನದ ಬಗ್ಗೆ ನೀಡಿದ ಹೇಳಿಕೆ ನಂತರವೂ ಡಿ.ಕೆ ಶಿವಕುಮಾರ್ ಪತ್ನಿಯೊಂದಿಗೆ ಅಲ್ಲಿ ಭಾಗವಹಿಸಿದ್ದರು. ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದ ಈಶಾ ಫೌಂಡೇಶನ್ ನ ಸದ್ಗುರು ಆಯೋಜಿಸಿದ್ದ ಶಿವರಾತ್ರಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಭಾಗವಹಿಸಿದ್ದರು. ಹೀಗಾಗಿ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.