Ad imageAd image

ಪ್ರೊ.ರವಿ ಗೋಲಾ ಅವರಿಗೆ ಡಾಕ್ಟರೇಟ್ ಪದವಿ

ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಮತ್ತು ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ರವಿ ಗೋಲಾ ಅವರು

Nagesh Talawar
ಪ್ರೊ.ರವಿ ಗೋಲಾ ಅವರಿಗೆ ಡಾಕ್ಟರೇಟ್ ಪದವಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಮತ್ತು ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ರವಿ ಗೋಲಾ ಅವರು, ಆಂಧ್ರಪ್ರದೇಶದ ಕುಪ್ಪಂನಲ್ಲಿರುವ ದ್ರಾವಿಡಿಯನ್ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿರುವ ಮಹಾಪ್ರಬಂಧಕ್ಕೆ ಡಾಕ್ಟರೇಟ್(Ph.d) ಪದವಿ ಪಡೆದಿದ್ದಾರೆ. ಕ್ರಿಕೆಟ್ ಸಂಬಂಧಿಸಿದ ‘ದಿ ಇಂಪೆಕ್ಟ್ ಆಫ್ ಸೆಲ್ಪ್ ಎಸ್ಟಿಂ ಸಬ್ಜೆಕ್ಟಿವ್ ವೆಲ್ ಬೀಯಿಂಗ್ ಅಂಡ್ ಸಪೋರ್ಟಿವ್ ಸ್ಪಕ್ಟೇಟರ್ಸ್ ಬಿಹೇವಿಯರ್ ಆಲ್ ದ್ ಪಪರ್ಫಾರ್ಮೇನ್ಸ್ ಆಫ್ ಕ್ರೀಕೇಟರ್ಸ್’ ಅನ್ನೋ ಮಹಾಪ್ರಬಂಧ ಮಂಡಿಸಿದ್ದಾರೆ.

ಇವರಿಗೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರೊ.ಹಣುಮಂತಯ್ಯ ಪೂಜಾರಿ ಅವರು ಮಾರ್ಗದರ್ಶನ ಮಾಡಿದ್ದಾರೆ. ಡಾಕ್ಟರೇಟ್ ಪದವಿ ಪಡೆದ ರವಿ ಗೋಲಾ ಅವರಿಗೆ ಸಂಸ್ಥೆಯ ಚೆರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ, ಪ್ರಾಚಾರ್ಯ ಪ್ರೊ.ಡಿ.ಎಮ್.ಪಾಟೀಲ, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಶುಭ ಕೋರಿದ್ದಾರೆ. ಇವರು ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ವೀಕ್ಷಕ ವಿವರಣೆಗಾರರಾಗಿ ಗುರುತಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article