ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿಕೊಂಡು ಹೋಗಿದ್ದರಿಂದ ಬಾಗಿನ ಅರ್ಪಿಸುವ ಕೆಲಸ ಮುಂದೂಡಲಾಗಿತ್ತು. ಗೇಟ್ ದುರಸ್ತಿಗಳಿಸಿದ ನಂತರ 2ನೇ ಬಾರಿಗೆ ಜಲಾಶಯ(Dam) ತುಂಬಿದೆ. ಹೀಗಾಗಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇತರೆ ಸಚಿವರು, ಶಾಸಕರ ಸಮ್ಮುಖದಲ್ಲಿ ಬಾಗಿನ ಅರ್ಪಿಸಲಾಯಿತು. ಇದೇ ವೇಳೆ ಕ್ರೆಸ್ಟ್ ಗೇಟ್ ಅನ್ನು ಅತ್ಯಂತ ವೇಗವಾಗಿ ಅಳವಡಿಸಿದೆ ಎಂಜಿನಿಯರ್ ಹಾಗೂ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ಒಂದೇ ವಾರದಲ್ಲಿ ತುಂಗಭದ್ರಾ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ(TMC) ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಎರಡನೇ ಬೆಳೆಗೂ ನೀರು ಸಿಗತ್ತದೆ. ಈ ಭಾಗದ ರೈತರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ. ಗೇಟ್ ಮುರಿದಾಗ ನಮ್ಮ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ ಸಚಿವರು ಮತ್ತು ನಾನು ಚರ್ಚಿಸಿ ತುರ್ತಿನ ಕ್ರಮಕ್ಕೆ ಮುಂದಾದೆವು. ನಮ್ಮ ಸೂಚನೆಯಂತೆ ಒಂದೇ ವಾರದಲ್ಲಿ ಗೇಟ್ ಅಳವಡಿಸಿ 20 ಟಿಎಂಸಿ ನೀರನ್ನು ಉಳಿಸಿದ ತಜ್ಞ ಕನ್ನಯ್ಯ ನಾಯ್ಡು ಮತ್ತು ಎಂಜಿನಿಯರ್ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದರು.
ಎಡ ಮತ್ತು ಬಲ ದಂಡೆ ಕಾಲುವೆ ಸೇರಿ ರಾಜ್ಯದ 9,26,438 ಎಕರೆ ಕೃಷಿಭೂಮಿಗೆ, ಆಂಧ್ರದ 6,25,097 ಎಕರೆ, ತೆಲಂಗಾಣದ 87,000 ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ತುಂಗಭದ್ರಾ ಅಣೆಕಟ್ಟು 2ನೇ ಬಾರಿ ತುಂಬಿರುವುದ ಸಂತಸದ ವಿಚಾರ. ವಿರೋಧ ಪಕ್ಷದ ಮಾತುಗಳಿಗೆ ಕಿವಿಕೊಡಬೇಡಿ. ಮೊದಲು ದಿನಕ್ಕೊಂದು ಸುಳ್ಳು ಹೇಳುತ್ತಿದ್ದ ಬಿಜೆಪಿ ಈಗ ಗಳಿಗೆಗೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ. ಬಿಜೆಪಿ ನಿಮ್ಮನ್ನು ಯಾಮಾರಿಸಿ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎನ್ನುವ ನಂಬಿಕೆ ನನಗಿದೆ. ಏಕೆಂದರೆ ಕೊಪ್ಪಳ, ಬಳ್ಳಾರಿ, ವಿಜಯನಗರದ ಜನತೆ ಏನು ಅಂತ ನನ್ನ ಹೃದಯಕ್ಕೆ ಚನ್ನಾಗಿ ಗೊತ್ತು. ಬಿಜೆಪಿ ಮಾತನ್ನು ನಂಬಬೇಡಿ. ಎರಡೂ ಬೆಳೆಗೂ ನೀರು ಕೊಡುತ್ತೇವೆ. ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಕ್ಯಾಬಿನೆಟ್ ನಡೆಸಿ 46 ವಿಷಯಗಳನ್ನು, ಅನೇಕ ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕದ ಅಭಿವಧ್ಧಿಗಾಗಿ ಘೋಷಿಸಿದ್ದೇವೆ ಅಂತಾ ಹೇಳಿದರು.