ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. 2026-27ನೇ ಸಾಲಿನ ಬಜೆಟ್ ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ವಿಜಯಪುರ ಹಾಗೂ ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಂಬಂ ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು ಎಂದಿದ್ದಾರೆ.
ಇದರ ಜೊತೆಗೆ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಮೈಸೂರಿನಲ್ಲಿರುವ 400 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು 180 ಕೋಟಿ ರೂಪಾಯಿ, ಯಾದಗಿರಿ, ಕಾರವಾರದಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆ, ಕಲಬುರ್ಗಿ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐಪಿಎಫ್ ಕೇಂದ್ರ ಸ್ಥಾಪಿಸಲು ತಲಾ 1 ಕೋಟಿ ರೂಪಾಯಿ.
ವಿಜಯನಗರ, ಕೊಪ್ಪಳದಲ್ಲಿ ಮೂರನೇ ಹಂತದ ಕ್ಯಾನ್ಸರ್ ಆರೈಕೆ ಮಾಡಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್, ಟಿ.ಬಿ ಡ್ಯಾಂನಲ್ಲಿ ಸ್ಥಾಪನೆ. ಬೆಂಗಳೂರಿನ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಹಾಗೂ ಬಿಡಿಎಸ್ ವಿದ್ಯಾರ್ಥಿಗಳ ಬಾಲಕರ ವಸತಿ ನಿಲಯ ಸ್ಥಾಪನೆಗೆ 10 ಕೋಟಿ ಅನುದಾನ ನೀಡಲಾಗುವುದು ಎಂದಿದ್ದಾರೆ.




