Ad imageAd image

ವಿದ್ಯಾರ್ಥಿಗಳು ಗ್ರಂಥಾಲಯದ ಸದುಪಯೋಗ ಪಡೆಯಬೇಕು: ಡಾ.ಅರವಿಂದ ಮನಗೂಳಿ

ವಿದ್ಯಾರ್ಥಿಗಳ ಭವಿಷ್ಯತ್ತನ್ನು ರೂಪಿಸುವ ನೈಜವಾದ ಕಳಕಳಿಯನ್ನು ಸಾರಂಗಮಠದ ಪೂಜ್ಯರು ಹೊಂದಿದ್ದಾರೆ ಎಂದು ಸಿ.ಎಂ.ಮನಗೂಳಿ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.

Nagesh Talawar
ವಿದ್ಯಾರ್ಥಿಗಳು ಗ್ರಂಥಾಲಯದ ಸದುಪಯೋಗ ಪಡೆಯಬೇಕು: ಡಾ.ಅರವಿಂದ ಮನಗೂಳಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ವಿದ್ಯಾರ್ಥಿಗಳ ಭವಿಷ್ಯತ್ತನ್ನು ರೂಪಿಸುವ ನೈಜವಾದ ಕಳಕಳಿಯನ್ನು ಸಾರಂಗಮಠದ ಪೂಜ್ಯರು ಹೊಂದಿದ್ದಾರೆ ಎಂದು ಸಿ.ಎಂ.ಮನಗೂಳಿ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು. ಪಟ್ಟಣದ ಶ್ರೀ ಪದ್ಮಾರಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಲಿಂ.ಚನ್ನವೀರ ಸ್ವಾಮೀಜಿಗಳು ಹಾಕಿಕೊಟ್ಟ ಮಾರ್ಗದಲ್ಲಿಯೇ ಇಂದಿನ ಪೂಜ್ಯರು ನಡೆದುಕೊಳ್ಳುತ್ತಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ಉನ್ನತ್ತ ಮಟ್ಟದಲ್ಲಿ ಬೆಳಸುತ್ತಿದ್ದಾರೆ. ವಿದ್ಯಾರ್ಥಿಗಳು ಹೆಚ್ಚೆಚ್ಚು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳುತ್ತಾ ಮಹಾವಿದ್ಯಾಲಯದ ಗ್ರಂಥಾಲಯಕ್ಕೆ 21 ಸಾವಿರ ರೂಪಾಯಿಯನ್ನು ಪುಸ್ತಕಗಳ ಖರೀದಿಗೆ ನೀಡಿದರು.

ಅತಿಥಿಗಳಾಗಿ ಆಗಮಿಸಿದ ಸುಜಾತಾ ಶಿವುಮಠ ಮಾತನಾಡಿದರು. ಈ ವೇಳೆ ಮಹಿಳಾ ವಿಶ್ವವಿದ್ಯಾಲಯಕ್ಕೆ ರ‍್ಯಾಂಕ್ ಬಂದ ಬಿಎಸ್‌ಡಬ್ಲು ವಿಭಾಗದ 10 ವಿದ್ಯಾರ್ಥಿಗಳಿಗೆ ಹಾಗೂ ಕುಪ್ಪಂನಲ್ಲಿರುವ ದ್ರಾವಿಡ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಜಿ.ಪಿ.ಪೋರವಾಲ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಸಾನಿಧ್ಯ ವಹಿಸಿದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರಾಚಾರ್ಯ ಎಸ್.ಎಂ. ಪೂಜಾರಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಅನೀಲಕುಮಾರ ರಜಪೂತ, ಎಸ್.ಎಮ್.ಹೂಗಾರ, ಎಮ್.ಕೆ.ಬಿರಾದಾರ, ಜಿ.ವಿ ಪಾಟೀಲ, ಹೇಮಾ ಹಿರೇಮಠ, ಮಂಗಳಾ ಈಳಗೇರ, ಡಿ.ಎಂ.ಪಾಟೀಲ, ಶಂಕರ ಕುಂಬಾರ, ಮಮತಾ ಹರನಾಳ, ವಿಜಯಲಕ್ಷ್ಮಿ ಭಜಂತ್ರಿ ಸೇರಿ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗ ಹಾಗೂ ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಯು.ಸಿಪೂಜೇರಿ ವರದಿ ವಾಚಿಸಿದರು. ಉಪನ್ಯಾಸಕ ಎಸ್.ಸಿ.ದುದ್ದಗಿ ಸ್ವಾಗತಿಸಿದರು. ವಿದ್ಯಾರ್ಥಿ ಕಾಂಚನಾ ಪ್ರಾರ್ಥಿಸಿದರು. ಪ್ರಿಯಾಂಕಾ ಕಕ್ಕಳಮೇಲಿ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕಾವೇರಿ ರೇವೂರ ವಂದಿಸಿದರು.

WhatsApp Group Join Now
Telegram Group Join Now
Share This Article