Ad imageAd image

ಚರಕ ನೂಲುವ ಮೂಲಕ ಸಿಎಂ, ಡಿಸಿಎಂರಿಂದ ಫೋಟೋ ಗ್ಯಾಲರಿಗೆ ಚಾಲನೆ

Nagesh Talawar
ಚರಕ ನೂಲುವ ಮೂಲಕ ಸಿಎಂ, ಡಿಸಿಎಂರಿಂದ ಫೋಟೋ ಗ್ಯಾಲರಿಗೆ ಚಾಲನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ತುಂಬಿದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಎರಡು ದಿನಗಳ ‘ಗಾಂಧಿ ಭಾರತ’ ಕಾರ್ಯಕ್ರಮ ಹಮ್ಮಿಕೊಂಡಿದೆ. ವೀರಸೌಧದಲ್ಲಿ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಎಐಸಿಸಿ ಸಭೆ ನಡೆದ ಸ್ಥಳದಲ್ಲಿ ಫೋಟೋ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಚಾಲನೆ ನೀಡಲಾಗಿದೆ.

ಇಲ್ಲಿ ಮಹಿಳಾ ಸ್ವಸಾಹಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ. ಗುರುವಾರ ಹಾಗೂ ಶುಕ್ರವಾರ ಎರಡು ದಿನ ಪೂರ್ತಿ ಹತ್ತು ಹಲವು ಕಾರ್ಯಕ್ರಗಳನ್ನು ಹಮ್ಮಿಕೊಂಡಿದ್ದು, ಇಡೀ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ.

ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಹೆಚ್.ಕೆ ಪಾಟೀಲ, ಎಂ.ಬಿ ಪಾಟೀಲ, ಹೆಚ.ಸಿ ಮಹಾದೇವಪ್ಪ, ಕೆ.ಹೆಚ್ ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಆರ್.ವಿ ದೇಶಪಾಂಡೆ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article