Ad imageAd image

ವಿಜಯಪುರ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

Nagesh Talawar
ವಿಜಯಪುರ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಜಯಪುರ ಹಾಗೂ ಬೆಂಗಳೂರಿನ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಡಾ.ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ವಿಜಯಪುರ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ್ ದೈವಾಡಿ ಮಾತನಾಡಿ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ ಅವರ ಜನ್ಮ ದಿನಾಚರಣೆಯಾದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಇಂತಹ ಮಹಾನ್ ಕ್ರೀಡಾ ಸಾಧಕರ ಸಾಧನೆಯಿಂದ ಸ್ಪೂರ್ತಿ ಪಡೆದುಕೊಳ್ಳಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕಾ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿದೆ ಎಂದು ಹೇಳಿದರು.

ಜಾವಿದ್.ಎಂ.ಜಮಾದಾರ ಅವರು ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲವು ಸಾಮಾನ್ಯ. ಸೋಲಿಗೆ ಕುಗ್ಗದೆ, ಗೆಲುವಿಗೆ ಹಿಗ್ಗದೆ ಎರಡನ್ನು ಸಮಾನವಾಗಿ ಸ್ವೀಕರಿಸಿ ನಿರಂತರವಾಗಿ ಪರಿಶ್ರಮದಿಂದ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯ, ರಾಷ್ಟ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದರು. ಅಡಿವೆಪ್ಪ ಸಾಲಗಲ್ ಮಾತನಾಡಿ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಅವರು ಹಾಕಿಯಲ್ಲಿ ತಮ್ಮದೆಯಾದ ಛಾಪು ಮೂಡಿಸಿ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರಂತೆ ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಹೇಳಿದರು.

ಈ ವೇಳೆ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಂಗೀತಾ ಮಠಪತಿ ನಿರೂಪಿಸಿದರು. ವಾರ್ತಾ ಅಧಿಕಾರಿ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ನಾಗರಾಜ ಲಂಬು, ಎಸ್.ಕೆ.ಇನಾಮದಾರ್, ಜಿ.ಎಂ.ಕೊಕರೆ, ಸಂಜಯ ಹಿರೆಮಠ, ಎಸ್.ಎಸ್.ಹಿರೇಮಠ, ಕೃಷ್ಣ ರಾಠೋಡ, ಚಂದ್ರಕಾಂತ್ ತಾರನಾಳ ಸೇರಿದಂತೆ ವಿವಿಧ ಕ್ರೀಡಾ ತರಬೇತಿದಾರರು, ಕ್ರೀಡಾಪಟುಗಳು, ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಹಾಗೂ ಕ್ರೀಡಾಸಕ್ತರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article