ಪ್ರಜಾಸ್ತ್ರ ಸುದ್ದಿ
ಬೀದರ(Bidara): ಸ್ಲೀಪರ್ ಕೋಚ್ ಬಸ್ಸಿನಲ್ಲಿ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇಂದ್ರ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಡಿಪೋ 1ರಲ್ಲಿ ನಡೆದಿದೆ. ತಾಲೂಕಿನ ಆಣದೂರ ಗ್ರಾಮದ ರಾಜಕುಮಾರ(59) ಮೃತ ಬಸ್ ಚಾಲಕನಾಗಿದ್ದಾನೆ. ಬೀದರ್ ನಿಂದ ಬಳ್ಳಾರಿ ಸಂಚರಿಸುವ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಬುಧವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಎಸ್ಆರ್ ಟಿಸಿ ನೌಕರರ ಜಂಟಿ ಹೋರಾಟ ಸಮಿತಿ ಆರೋಪಿಸಿದೆ. ಮೃತರ ಕುಟುಂಬಕ್ಕೆ 50 ಲಕ್ಷ ರೂಪಾಯಿ, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಲಾಗಿದೆ. ಬೀದರ ನೂತನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬರಬೇಕಿದೆ.