ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ಪೊಲೀಸರು ಕಾರ್ಯಾಚರಣೆ ನಡೆಸಿ ಬೀದರ ಮೂಲದ ಡ್ರಗ್ಸ್ ಪೆಡ್ಲರ್ ವೊಬ್ಬನನ್ನು ಬಂಧಿಸಲಾಗಿದೆ. ಆತ ವೃತ್ತಿಯಲ್ಲಿ ವೈದ್ಯನಾಗಿದ್ದಾನೆ ಅನ್ನೋದು ಮತ್ತಷ್ಟು ಶಾಕಿಂಗ್ ವಿಚಾರವಾಗಿದೆ. ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಬಂಧಿತ ಆರೋಪಿಯಾಗಿದ್ದಾನೆ. ಈತನ ಬಂಧನದ ಬಳಿಕ ದಕ್ಷಿಣ ಜಿಲ್ಲೆಯಲ್ಲಿನ ಮಾದಕ ಜಾಲಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಹತ್ವದ ವಿಚಾರಗಳು ತಿಳಿದು ಬಂದಿವೆ.
ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಿಂದ ಮಂಗಳೂರಿಗೆ ಡ್ರಗ್ಸ್ ಪೂರೈಕೆಯಾಗುತ್ತಿರುವುದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯ ಪೂರೈಕೆ ಮಾಡಲಾಗುತ್ತಿದ್ದರು. ಈ ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಡಾಕ್ಟರ್ ಡ್ರಗ್ ಪೆಡ್ಲರ್ ಆಗಿರುವುದು ನಿಜಕ್ಕೂ ದುರಂತ. ವೈದ್ಯೆ ಪ್ರಜ್ವಲ್ ಪೀಣ್ಯಾಸ್ ಮಂಗಳೂರಿನ್ಲಲಿ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ. ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಮಾಡಿದ್ದಾನೆ.
ನಗರದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆಯಾಗುತ್ತಿದೆ ಎಂದು ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಇದರ ಬೆನ್ನಲ್ಲೆ ದೊಡ್ಡ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಿ 6 ಜನರು ಬಂಧಿಸಲಾಗಿದೆ. ಬೀದರ ಮೂಲದ ವೈದ್ಯ ಪ್ರಜ್ವಲ್ ಪೀಣ್ಯಾಸ್ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.