ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಕಳೆದೊಂದು ವಾರಕ್ಕಿಂತ ಹೆಚ್ಚು ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಗಲಾಟೆ ನಡೆದಿದೆ. ಕಲ್ಲು ತೂರಾಟ ಸಹ ನಡೆದಿದೆ. ಈ ವೇಳೆ ಡಿವೈಎಸ್ಪಿ ಅವರ ಕೈ ಮುರಿತವಾಗಿದೆ ಎಂದು ಹೇಳಲಾಗುತ್ತಿದೆ. ಹರ್ತಗಿ ಕ್ರಾಸ್ ಬಳಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
ರಸ್ತೆ ಬಂದ್ ಆಗಿದ್ದರಿಂದ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತವು. ಹೀಗಾಗಿ ಪೊಲೀಸರು ರಸ್ತೆ ಬಂದ್ ಮಾಡದಂತೆ ಮನವೊಲಿಸಲು ಯತ್ನಿಸಿದ್ದಾರೆ. ಈ ವೇಳೆ ನೂಕಾಟ, ತಳ್ಳಾಟ ನಡೆದಿದೆ. ಆಗ ಡಿವೈಎಸ್ಪಿಯವರ ಕೈ ಮುರಿತವಾಗಿದೆ. ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




