ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸೆಪ್ಟೆಂಬರ್ 22ರಿಂದ ಶುರುವಾಗಲಿರುವ ಮೈಸೂರು ದಸರಾಗೆ ಸಂಬಂಧಿಸಿದಂತೆ ಉದ್ಘಾಟಕರಾಗಿ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿ ಆಹ್ವಾನ ನೀಡಿದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಸೆಪ್ಟೆಂಬರ್ 19ರಂದು ವಿಚಾರಣೆ ನಡೆಸಲು ಕೋರ್ಟ್ ಮುಂದಾಗಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಾಗೂ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರ ಅವರ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿದ್ದು, ತುರ್ತು ವಿಚಾರಣೆ ಮಾಡಬೇಕು ಎಂದು ಅರ್ಜಿದಾರರು ಕೋರಿದರು. ಹೀಗಾಗಿ ಶುಕ್ರವಾರ ವಿಚಾರಣೆಗೆ ಒಪ್ಪಲಾಗಿದೆ. ಈ ಹಿಂದೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು, ಸೆಪ್ಟೆಂಬರ್ 15 ಕೋರ್ಟ್ ತಿರಸ್ಕರಿಸಿತು.