ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ(Shivamogga): ಕರ್ತವ್ಯಕ್ಕೆ ನಿಯೋಜಿಸಲು ಕೆಳ ಹಂತದ ಸಿಬ್ಬಂದಿಯಿಂದ ಲಂಚ ಪಡೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಟಿ.ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಕಾನ್ಸ್ ಟೇಬಲ್ ಪ್ರಸನ್ ಜಿಲ್ಲಾ ಖಜಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಐಎಎಸ್ ಹುದ್ದೆಗೆ ತಯಾರಿ ನಡೆಸಿದ್ದಾರೆ. ಇತ್ತೀಚೆಗೆ ಯುಪಿಎಸ್ ಸಿ ಪ್ರಿಲಿಮ್ಸ್ ನಲ್ಲಿ ಪಾಸ್ ಆಗಿದ್ದು, ಮುಖ್ಯ ಪರೀಕ್ಷೆಗೆ ಅಧ್ಯಯನ ನಡೆಸಲು ಅನುಕೂಲವಾಗಲು ಅಲ್ಲೇ ಕರ್ತವ್ಯ ನಿರ್ವಹಿಸಲು ಕೇಳಿಕೊಂಡಿದ್ದರು. ಇದಕ್ಕೆ ಡಿವೈಎಸ್ಪಿ 5 ಸಾವಿರ ರೂಪಾಯಿ ಲಂಚ ಕೇಳಿದ್ದಾರಂತೆ.
ಲಂಚ ಕೊಡಲು ಇಷ್ಟವಿಲ್ಲದ ಪ್ರಸನ್ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಪೊಲೀಸ್ ವಸತಿ ಗೃಹದಲ್ಲಿ ಡಿವೈಎಸ್ಪಿ ಟಿ.ಪಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಅಗತ್ಯವಿರುವ ಕಡೆ ಸಿಬ್ಬಂದಿಯನ್ನು ನೇಮಕ ಮಾಡುವಾಗ ಲಂಚ ಪಡೆಯುತ್ತಿದ್ದರು ಅನ್ನೋ ಆರೋಪ ಇವರ ಮೇಲೆ ಕೇಳಿ ಬಂದಿದೆ.