ಪ್ರಜಾಸ್ತ್ರ ಸುದ್ದಿ
ಭೋಪಾಲ್(Bhopal): ಬೆಂಕಿ ಅನಾಹುತದಿಂದಾಗಿ ಮನೆಯಲ್ಲಿ ಮಲಗಿದ್ದ ನಾಲ್ವರು ಮೃತಪಟ್ಟ ದುರಂತ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದಲ್ಲಿ ಶನಿವಾರ ನಸುಕಿನ ಜಾವ ಸುಮಾರು 4.45ರ ವೇಳೆಗೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮನೆಯಲ್ಲಿ ಹಾಲಿನ ಪಾರ್ಲರ್ ನಡೆಸಲಾಗುತ್ತಿತ್ತು. ಅಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಮನೆಗೆ ಆವರಿಸಿಕೊಂಡಿದೆಯಂತೆ. ಈ ಬಗ್ಗೆ ದರ್ವಾಜಾ ಠಾಣೆ ಪೊಲೀಸರಿಗೆ ಮಾಹಿತಿ ಬಂದಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ಕೊಟ್ಟು ಬೆಂಕಿ ನಂದಿಸುವ ಕೆಲಸ ಮಾಡಿದರು. ಅದಾಗಲೇ ನಾಲ್ವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.