ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಮೈಸೂರು ನಗರಾಭಿವೃದ್ಧಿ ಕಚೇರಿಯ ಮೇಲೆ ಶುಕ್ರವಾರ ಮುಂಜಾನೆ ಜಾರಿ(ED) ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 12 ಅಧಿಕಾರಿಗಳು, 20ಕ್ಕೂ ಹೆಚ್ಚು ಸಿಆರ್ ಪಿಎಫ್ ಭದ್ರತಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಲಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಮುಡಾ(MUDA) ಆಯುಕ್ತರು, ಅಧಿಕಾರಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ನಗರದ ತಾಲೂಕು ಕಚೇರಿಗಳಲ್ಲಿಯೂ ಪರಿಶೀಲನೆ ನಡೆಸಲಾಗುತ್ತಿದೆ. ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಹೀಗಾಗಿ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ.