ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಬಳ್ಳಾರಿ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ಮಾಡಿದ್ದಾರೆ. ಸಂಸದ ಇ.ತುಕಾರಾಂ, ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಕೂಡ್ಲಗಿ ಶಾಸಕ ಡಾ.ಎನ್.ಟಿ ಶ್ರೀನಿವಾಸ್, ಶಾಸಕ ಬಿ.ನಾಗೇಂದ್ರ ಅವರ ಆಪ್ತ ಗೋವರ್ದನ್ ರೆಡ್ಡಿ ಸೇರಿ ಜನಪ್ರತಿನಿಧಿಗಳಿಗೆ ಸಂಬಂಧಿಸಿದವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.
ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಅನ್ನೋದು ಗೊತ್ತಿಲ್ಲ. ನಾಗೇಂದ್ರ ಅವರ ಆಪ್ತನ ಮೇಲಿನ ದಾಳಿಯ ಹಿಂದೆ ವಾಲ್ಮೀಕಿ ಹಗರಣದ ತನಿಖೆಯ ಭಾಗವಾಗಿರಬಹುದು ಎನ್ನಲಾಗುತ್ತಿದೆ. ದಾಳಿಯ ವೇಳೆ ಸಂಸದರು, ಶಾಸಕರು ಮನೆಯಲ್ಲಿ ಇದ್ದರಂತೆ. ಕೂಡ್ಲಗಿ ಶಾಸಕ ಡಾ.ಎನ್.ಟಿ ಶ್ರೀನಿವಾಸ್ ಅವರು ತುಮಕೂರಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಮನೆ ಹಾಗೂ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರಂತೆ.