ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಬೆಟ್ಟಿಂಗ್ ಆಪ್ ಮೂಲಕ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನೋಟಿಸ್ ನೀಡಲಾಗಿದೆ. ಸೆಪ್ಟೆಂಬರ್ 22ರಂದು ವಿಚಾರಣೆಗೆ ಹಾಜರಾಗುವಂತೆ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಸುರೇಶ್ ರೈನಾ, ಶಿಖರ್ ಧವನ್ ಬಳಿಕ ಇಡಿ ನೋಟಿಸ್ ನೀಡಿದ ಮೂರನೇ ಮಾಜಿ ಕ್ರಿಕೆಟಿಗನಾಗಿದ್ದಾರೆ.
1xBet ಹೆಸರಿನ ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎನ್ನುವ ಆರೋಪ ಸಂಬಂಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ದೇಶದ ಹಲವು ನಟ, ನಟಿಯರು, ರಾಜಕೀಯ ನಾಯಕರು, ಕ್ರೀಡಾಪಟುಗಳಿಗೆ ಈಗಾಗ್ಲೇ ಇಡಿ ನೋಟಿಸ್ ನೀಡಿ ವಿಚಾರಣೆ ನಡೆಸಿದೆ.