ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಅಶ್ಲೀಲ ವಿಡಿಯೋ ನಿರ್ಮಾಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉದ್ಯಮಿ(Businessman)ಹಾಗೂ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಕಚೇರಿ ಮೇಲೆ ಇಡಿ(ED Raids) ಅಧಿಕಾರಿಗಳು ದಾಳಿಸಿದ್ದಾರೆ. ಶುಕ್ರವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ ಕುಂದ್ರಾ ಸೇರಿ ಇತರರ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಮುಂಬೈ ಹಾಗೂ ಉತ್ತರ ಪ್ರದೇಶ ಸೇರಿ ಸುಮಾರು 15 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಲ್ಯಾಪ್ ಟಾಪ್, ಕಂಪ್ಯೂಟರ್, ಹಾರ್ಡ್ ಡಿಸ್ಕ್, ಮೊಬೈಲ್ ಗಳು ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದೆ. ಇದೇ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜ್ ಕುಂದ್ರಾ ಜಾಮೀನಿನ ಮೇಲೆ ಹೊರಗೆ ಇದ್ದಾರೆ.