ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿವೆ. ಆದರೆ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಪರೀಕ್ಷೆಗಳ ಸಮಯವಾಗಿದೆ. ಬಂದ್ ದಿನ ಯಾವುದೇ ಪರೀಕ್ಷೆ ಮುಂದೂಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಾರ್ಚ್ ತಿಂಗಳಲ್ಲಿ 7, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯಿದೆ. ಮಾರ್ಚ್ 22ರಂದು ಪರೀಕ್ಷೆಯಿದ್ದು, ಅದನ್ನು ಮುಂದೂಡುವುದಿಲ್ಲ ಎಂದಿದ್ದಾರೆ. ಬೆಳಗಾವಿಯಲ್ಲಿ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಮಹಾದೇವ ಹುಕ್ಕೇರಿ ಎಂಬುವರ ಮೇಲೆ ಮರಾಠಿಗರು ನಡೆಸಿದ ಹಲ್ಲೆ ಖಂಡಿಸಿ ಈಗಾಗ್ಲೇ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿವೆ. ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಿಪಿಐ ಕಲ್ಯಾಣಕುಮಾರ ಶೆಟ್ಟಿಯನ್ನು ವರ್ಗಾವಣೆ ಮಾಡಲಾಗಿದೆ.
ಇನ್ನು 1ನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷ ಆಗರಬೇಕಿರುವುದು ಕಡ್ಡಾಯ. ೀ ನಿಯಮದಲ್ಲಿ ಯಾವುದೇ ಸಡಿಲಿಕೆ ಇಲ್ಲ. ಕೆಲವರು ಕೋರ್ಟ್ ಗೆ ಹೋಗಿದ್ದರು. ಅಲ್ಲಿ ಅರ್ಜಿ ವಜಾಗೊಂಡಿದೆ. 6 ವರ್ಷಕ್ಕೆ ಒಂದೆರಡು ತಿಂಗಳು ಕಡಿಮೆಯಿದೆ ಎಂದು ಒಂದು ಮಗುವಿಗೆ ಅವಕಾಶ ಕೊಟ್ಟರೆ ಮತ್ತೊಬ್ಬರು ಕೇಳುತ್ತಾರೆ. ಈಗ ಇದು ಕೋರ್ಟ್ ನಲ್ಲಿದೆ. ಕೋರ್ಟ್ ಹೇಳಿದಂತೆ ನಾವು ಪಾಲಿಸುತ್ತೇವೆ ಎಂದು ಹೇಳಿದರು.