ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ. ಈ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂದಿನಿ ಲೇಔಟ್ ನಲ್ಲಿ ಈ ಘಟನೆ ಬುಧವಾರ ನಡೆದಿದೆ. ವಶಕ್ಕೆ ಪಡೆದಿರುವ ಮೂವರ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.