ನಿರ್ಮಿತಿ ಕೇಂದ್ರದ ಎಂಜಿನಿಯರ್ ಆತ್ಮಹತ್ಯೆ?

Nagesh Talawar
ನಿರ್ಮಿತಿ ಕೇಂದ್ರದ ಎಂಜಿನಿಯರ್ ಆತ್ಮಹತ್ಯೆ?
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಗದಗ(Gadaga): ರಾಜ್ಯದಲ್ಲಿ ಒಂದಲ್ಲ ಒಂದು ಆತ್ಮಹತ್ಯೆ ಪ್ರಕರಣಗಳು ಸರ್ಕಾರವನ್ನು ಸಂಕಷ್ಟಕ್ಕೆ ದೂಡುವಂತೆ ಮಾಡುತ್ತಿವೆ. ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಹೊತ್ತಿನಲ್ಲಿಯೇ ಶುಕ್ರವಾರ ನಿರ್ಮಿತಿ ಕೇಂದ್ರದ ಎಂಜಿನಿಯರ್ ವೊಬ್ಬರು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರಗೌಡ ಪಾಟೀಲ(54) ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್ ಆಗಿದ್ದಾರೆ.

ಗದಗ ನಗರದ ನಿವಾಸಿಯಾಗಿದ್ದಾರೆ. ಗುತ್ತಿಗೆ ಆಧಾರದ ಮೇಲೆ ನಿರ್ಮಿತಿ ಕೇಂದ್ರದ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಸುಮಾರು 7.30ಕ್ಕೆ ಮನೆಯಿಂದ ಹೋಗಿದ್ದಾರೆ. ನಗರದ ಪಲ್ಲವಿ ಲಾಡ್ಜ್ ನಲ್ಲಿ ರೂಮ್ ಮಾಡಿದ್ದಾರೆ. ರೂಮ್ ನಂಬರ್ 513ರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಅನುಮಾನಗಳು ಮೂಡಿಸಿವೆ. ಆತನಿಗೆ ಯಾವುದೇ ಸಾಲ ಇರಲಿಲ್ಲ. ಸಾಕಷ್ಟು ಆಸ್ತಿ ಇದೆ. ಇದೊಂದು ಕೊಲೆ ಎಂದು ಮೃತನ ಸಹೋದರ ಹೇಳುತ್ತಿದ್ದು, ಪೊಲೀಸ್ ತನಿಖೆಯಿಂದ ಸತ್ಯಾಸತ್ಯತೆ ತಿಳಿದು ಬರಬೇಕಿದೆ.

WhatsApp Group Join Now
Telegram Group Join Now
Share This Article