ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಟಿ-20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯ ಇಲ್ಲಿನ ವಾಂಖಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವೆ ಫೈನಲ್ ಗಾಗಿ ಹಣಾಹಣಿ ನಡೆಯುತ್ತಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.
ನಾಕೌಟ್ ಪಂದ್ಯದಲ್ಲಿ ವೆಸ್ಟ್ ಇಂಡಿಸ್ ವಿರುದ್ಧ ಆಡಿ ಭರ್ಜರಿ ಗೆಲುವು ದಾಖಲಿಸಿದ ಭಾರತ ಇದೀಗ ಫೈನಲ್ ಪಂದ್ಯಕ್ಕೆ ಟಿಕೆಟ್ ಪಡೆಯಲು ಇಂಗ್ಲೆಂಡ್ ವಿರುದ್ಧ ಸೆಣಸಾಟ ನಡೆಸಲಿದೆ. ಎರಡು ತಂಡಗಳು ಯಾವುದೇ ಬದಲಾವಣೆಯನ್ನು ಮಾಡದೆ ಹಿಂದಿನ ಭಾರ ಮೈದಾನಕ್ಕೆ ಇಳಿದಿದ್ದ ತಂಡವೇ ಮುಂದುವರೆದಿದೆ.




