Ad imageAd image

ಪ್ರಧಾನಿ ಮೋದಿಗೆ ಇಥಿಯೋಪಿಯಾ ಪ್ರಶಸ್ತಿ

Nagesh Talawar
ಪ್ರಧಾನಿ ಮೋದಿಗೆ ಇಥಿಯೋಪಿಯಾ ಪ್ರಶಸ್ತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ನೀಡಲಾಗಿದೆ. ಅಡಿಸ್ ಅಬಬಾದ್ ಅಂತಾರಾಷ್ಟ್ರೀಯ ಕನ್ವೆನ್ಷನ್ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಪ್ರಶಸ್ತಿ ಪ್ರದಾನ ಮಾಡಿದರು.

ಈ ಪ್ರಶಸ್ತಿ ಪಡೆದ ಭಾರತದ ಮೊದಲ ಪ್ರಧಾನಿಯಾಗಿದ್ದಾರೆ. ಈ ಪ್ರಶಸ್ತಿಯನ್ನು ಭಾರತದ 140 ಕೋಟಿ ಜನರಿಗೆ ಅರ್ಪಿಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದು ಮೋದಿಗೆ ದೊರೆತ 28ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ. ಭಾರತ ಹಾಗೂ ಇಥಿಯೋಪಿಯೋಪಿಯಾ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಿಪಡಿಸಲು ಈ ಪ್ರಶಸ್ತಿ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

WhatsApp Group Join Now
Telegram Group Join Now
Share This Article