ಪ್ರಜಾಸ್ತ್ರ ಸುದ್ದಿ
ಮಂಡ್ಯ(Manday): ನಾಗಮಂಗಲ ಮಾಜಿ ಶಾಸಕ ಸುರೇಶಗೌಡ ಅವರ ಕಾರು ಶನಿವಾರ ತಡರಾತ್ರಿ ಬೊಂತೆಕೊಪ್ಪಲ ಹತ್ತಿರ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಕೈಗೆ ಗಂಭೀರವಾದ ಗಾಯವಾಗಿದೆ. ಈಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಯಕರ್ತರ ಮದುವೆಗೆ ಹೋಗುವಾ ಅಪಘಾತವಾಗಿದೆ. ಗನ್ ಮ್ಯಾನ್ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಕಾರು ಚಾಲಕ ಶೇಖರ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.




