ಪ್ರಜಾಸ್ತ್ರ ಸುದ್ದಿ
ಸ್ವಿಟ್ಜರ್ ಲೆಂಡ್(Switzerland): ಹೊಸ ವರ್ಷದ ಸಂಭ್ರಮದ ವೇಳೆಯೇ ದುರಂತವೊಂದು ನಡೆದಿದ್ದು, 40 ಜನರು ಮೃತಪಟ್ಟ ಘಟನೆ ನಡೆದಿದೆ. ಕ್ರಾನ್ಸ್ ಮೊಂಟೆನಾದ ಐಶಾರಾಮಿ ಹೋಟೆಲ್ ವೊಂದರಲ್ಲಿ ಸ್ಫೋಟ ಸಂಭವಿಸಿದೆ. ಈ ವೇಳೆ 40 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಈ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ.
ಸಂಗೀತ ಕಚೇರಿ ವೇಳೆ ಪಟಾಕಿ ಸಿಡಿದು ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಹೋಟೆಲ್ ಹೊತ್ತಿ ಉರಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಫೋಟದ ಸದ್ದು ಕೇಳಿ ಬಂದಿದೆ. ಅನೇಕರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.




