ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ನಗರದ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಬಸ್ ನಿಲ್ದಾಣದಲ್ಲಿನ ಶೌಚಾಲಯದಲ್ಲಿ ಸಿಕ್ಕ ಬ್ಯಾಗ್ ನಲ್ಲಿ ಜಿಲೇಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್ ಪತ್ತೆಯಾಗಿವೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ಈ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
ಇಲ್ಲಿ ಬ್ಯಾಗ್ ತಂದು ಇಟ್ಟಿದ್ಯಾರು? ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದು ಹೋದವರ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಅಲ್ಲಿರುವ ಸಿಸಿಟಿವಿ ಪರಿಶೀಲನೆ ಮೂಲಕ ಶೌಚಾಲಯಕ್ಕೆ ಹೋಗಿ ಬ್ಯಾಗ್ ಇಟ್ಟು ಬಂದಿದ್ದು ಯಾರು ಅನ್ನೋದು ಸೇರಿದಂತೆ ಎಲ್ಲ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ.