Ad imageAd image

ದರ್ಶನ್ ಸೇರಿ ಎಲ್ಲರ ನ್ಯಾಯಾಂಗ ಬಂಧನ ವಿಸ್ತರಣೆ

ಕೊಲೆ ಪ್ರಕರಣದಲ್ಲಿ ಎ2 ಆಗಿರುವ ನಟ ದರ್ಶನ್ ಎ1 ಆಗಿರುವ ದರ್ಶನ್ ಆಪ್ತೆ ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದೆ.

Nagesh Talawar
ದರ್ಶನ್ ಸೇರಿ ಎಲ್ಲರ ನ್ಯಾಯಾಂಗ ಬಂಧನ ವಿಸ್ತರಣೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕೊಲೆ ಪ್ರಕರಣದಲ್ಲಿ ಎ2 ಆಗಿರುವ ನಟ ದರ್ಶನ್(Darshan) ಎ1 ಆಗಿರುವ ದರ್ಶನ್ ಆಪ್ತೆ ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದೆ. ಇಂದು ನಗರದ 24ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ರಾಜ್ಯದ ವಿವಿಧ ಜೈಲುಗಳಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಹಾಜರು ಪಡಿಸಲಾಯಿತು. ಎಲ್ಲ ಆರೋಪಿಗಳ ನ್ಯಾಯಾಂಗ(Judicial Custody) ಬಂಧನ ಅವಧಿಯನ್ನು ಸೆಪ್ಟೆಂಬರ್ 30ರ ತನಕ ಮುಂದೂಡಲಾಯಿತು.

ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ, ಬೆಳಗಾವಿ, ತುಮಕೂರು ಜೈಲಿನಿಂದ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ದರ್ಶನ್ ಪರ ವಕೀಲರು ಬೆನ್ನು ನೋವಿಗೆ ಕುರ್ಚಿ ಕೇಳಿದ್ದು, ಸ್ನೇಹಿತರ ಭೇಟಿಗೆ ಅವಕಾಶ ಕೋರಿದರು. ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಕೋರ್ಟ್ ಜೈಲು ಅಧಿಕಾರಿಗಳಿಗೆ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
Share This Article