ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ಆಲಮೇಲ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನಕಲಿ ವೈದ್ಯರು ಅನಧಿಕೃತ ಕ್ಲಿನಿಕ್ ಗಳನ್ನು ತೆರೆದುಕೊಂಡಿರುವುದು ಕಂಡು ಬಂದಿದೆ ಎಂದು ತಹಶೀಲ್ದಾರ್ ಕೆ.ವಿಜಯಕುಮಾರ ತಿಳಿಸಿದ್ದಾರೆ. ಇಂತಹ ನಕಲಿ ವೈದ್ಯರ ಬಳಿ ಸಾರ್ವಜನಿಕರು ಚಿಕಿತ್ಸೆ ಪಡೆಯದೆ, ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಿರಿ ಎಂದಿದ್ದಾರೆ.
ನಕಲಿ ವೈದ್ಯರು ಕಂಡು ಬಂದಿಲ್ಲಿ ದೂರು ಸಲ್ಲಿಸಿ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಹಶೀಲ್ದಾರ್ ಕೆ.ವಿಜಯಕುಮಾರ ತಿಳಿಸಿದ್ದಾರೆ.