ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ ಚುನಾವಣಾ ರಾಜಕಾರಣದಿಂದ ದೂರ ಸರಿಯುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಗುರುವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಅವರು, ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳುತ್ತೇನೆ. ಆದರೆ, ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.
ನಾನು ಹಲವು ಸಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಜನರೆ ಹಣ ನೀಡಿ ಆಶೀರ್ವಾದ ಮಾಡಿದ್ದರು. ಈಗ ಹಣ ನೀಡಿ ಚುನಾವಣೆ ಎದುರಿಸುವ ಸ್ಥಿತಿ ಇದೆ. ಹೀಗಾಗಿ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೆಚ್.ವಿಶ್ವನಾಥ ಹೇಳಿದ್ದಾರೆ.




