ಪ್ರಜಾಸ್ತ್ರ ಸುದ್ದಿ
ಹಾಸನ(Hasan): ಕಾಡಾನೆ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ರೈತ ರಾಜಶೆಟ್ಟಿ(65) ಮೃತದುರ್ದೈವಿ ಎಂದು ತಿಳಿದು ಬಂದಿದೆ. ಸೊಂಡಿಲಿನಿಂದ ಎತ್ತಿ ಬಿಸಾಡಿದೆ. ಅಲ್ಲದೆ ಅವರಿಗೆ ಕಾಲಿನಿಂದ ತುಳಿದು ಸಾಯಿಸಿದೆ.
ದಾಳಿ ಮಾಡಿದೆ ಆನೆ ಮೃತದೇಹದ ಹತ್ತಿರದಲ್ಲಿಯೇ ಬೀಡುಬಿಟ್ಟಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಈ ಬಗ್ಗೆ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸರೊಂದಿಗೆ ಸ್ಥಳಕ್ಕೆ ಬಂದಿದ್ದು, ಆನೆ ಓಡಿಸುವ ಕೆಲಸ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




