ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ವಿಜಯಪುರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಸಿಂದಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಆತ್ಮ ಯೋಜನೆ ಅಡಿಯಲ್ಲಿ ಅಂತರ ರಾಜ್ಯ ಮಟ್ಟದ ರೈತರ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ನೆರೆಯ ಮಹಾರಾಷ್ಟ್ರದ ಪುಣೆಯ ಜಿಲ್ಲೆಯ ಭಾರಮತಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಸಿಂದಗಿ, ದೇವರ ಹಿಪ್ಪರಗಿ ಸೇರಿದಂತೆ ಜಿಲ್ಲೆಯ ಹಲವು ರೈತರು ಭೇಟಿ ನೀಡಿ ಆಧುನಿಕ ಕೃಷಿ ಪದ್ಧತಿ ಬಗ್ಗೆ ತಿಳಿದುಕೊಂಡರು.
ಕೃಷಿ ಬೆಳೆಗಳು, ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ ತರಭೇತಿಯನ್ನು ಪಡೆಯಲಾಯಿತು. ದಾಳಿಂಬೆ, ತೊಗರಿ, ಕಬ್ಬು, ಬಾಳೆ, ದ್ರಾಕ್ಷಿ ಸೇರಿದಂತೆ ವಿವಿಧ ಬೆಳೆಗಳ ವಿವಿಧ ತಳಿಗಳು ಇರಬಹುದು, ಹೆಚ್ಚಿನ ಇಳುವರಿ ಪಡೆಯುವುದು ಇರಬಹುದು, ಕಳೆಯನ್ನು ನಿಯಂತ್ರಣ ಮಾಡುವುದು ಹೇಗೆ ಅನ್ನೋದು ಸೇರಿದಂತೆ ಹಲವಾರ ವಿಚಾರಗಳನ್ನು ರೈತರಿಗೆ ತಿಳಿಸಿಕೊಡಲಾಯಿತು. ತರಬೇತಿಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ರೈತರು ಭಾಗವಹಿಸಿದ್ದರು.




