ಪ್ರಜಾಸ್ತ್ರ ಸುದ್ದಿ
ರಾಯಚೂರು(Raichoru): ನಿಜಕ್ಕೂ ಇದೊಂದು ಅತ್ಯಂತ ಹೃದಯವಿದ್ರಾವಕ ಘಟನೆ. ಗರ್ಭಿಣಿ ಸೊಸೆಯನ್ನು ಮಾವನೆ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಚಿಕ್ಕಹಣಗಿ ಗ್ರಾಮದಲ್ಲಿ ಬುಧವಾರ ನಡೆದಿದೆ. ರೇಖಾ ನಾಗರಾಜ(25) ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ.
ಮಾವ ಸಿದ್ದಪ್ಪ ಸೊಸೆಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೊಲೆಯಾದ ರೇಖಾ ಗರ್ಭಿಣಿ ಎಂದು ಹೇಳಲಾಗುತ್ತಿದೆ. ಯಾವ ಕಾರಣಕ್ಕೆ ಇಷ್ಟೊಂದು ಹೀನ ಕೃತ್ಯವನ್ನು ಮಾವ ಸಿದ್ದಪ್ಪ ಎಸಗಿದ್ದಾನೆ ಅನ್ನೋ ಪ್ರಶ್ನೆ ಮೂಡಿದೆ. ಕವಿತಾಳ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.




