ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ-ಜೆಡಿಎಸ್(BJP-JDS) ಪಾದಯಾತ್ರೆಯ ಸಮಾರೋಪ ಸಮಾರಂಭ ಶನಿವಾರ ನಡೆಯಿತು. ಈ ವೇಳೆ ಮಾತನಾಡಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್(BSY) ಯಡಿಯೂರಪ್ಪ, ನಾನು ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತೇನೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ, ನಾನು ನಿಮ್ಮನ್ನು ಮನೆಗೆ ಕಳಿಸುವರೆಗೂ ಹೋರಾಡುತ್ತೇನೆ. ನನ್ನ ಕೊನೆಯ ಉಸಿರಿರುವವರೆಗೂ ಸಾರ್ವಜನಿಕ ಜೀವನದಲ್ಲಿರುತ್ತೇನೆ ಎಂದರು.
ರಾಜ್ಯದ ಜನತೆ ನಿಮ್ಮ ಆದಷ್ಟು ಬೇಗ ಮನೆಗೆ ಕಳಿಸುತ್ತಾರೆ. ಧೈರ್ಯವಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ. ಇಂದು ಚುನಾವಣೆ ನಡೆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬರಲಿದೆ ಎಂದರು. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಬೊಮ್ಮಾಯಿ, ಪರಿಷತ್ ಸದಸ್ಯ ಸಿ.ಟಿ ರವಿ ಸೇರಿದಂತೆ ಹಲವು ನಾಯಕರು ಮಾತನಾಡಿದರು.